Home » ಲಾರಿ ಡಿಕ್ಕಿ ಮಹಿಳೆಯ ಮೃತ್ಯು
 

ಲಾರಿ ಡಿಕ್ಕಿ ಮಹಿಳೆಯ ಮೃತ್ಯು

by Kundapur Xpress
Spread the love

ಕುಂದಾಪುರ : ನಗರದ ರಾಷ್ಟ್ರೀಯ ಹೆದ್ದಾರಿ 66ರ ಹಳೆ ಆದರ್ಶ ಆಸ್ಪತ್ರೆಯ ಎದುರುಗಡೆಯಲ್ಲಿ ಇಂದು ಮುಂಜಾನೆ 5.30ರ ಸುಮಾರಿಗೆ ಲಾರಿಯೊಂದು ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ

ರಾಷ್ಟ್ರೀಯ ಹೆದ್ದಾರಿಯ ಹಳೇ ಆದರ್ಶ ಆಸ್ಪತ್ರೆಯ ಎದುರುಗಡೆ ನಿವಾಸಿ ರಾಧಾ (71 ವರ್ಷ) ಎಂಬವರು ರಸ್ತೆ ದಾಟುತ್ತಿದ್ದಾಗ ಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಈಚರ್ ಲಾರಿಯು ಡಿಕ್ಕಿ ಹೊಡೆದಿದೆ

ಸ್ಥಳದಲ್ಲೇ ಮೃತಪಟ್ಟ ಮಹಿಳೆಯನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು ಕುಂದಾಪುರ ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

   

Related Articles

error: Content is protected !!