52
ಕಿನ್ನಿಗೋಳಿ : ಎಸ್. ಕೋಡಿಯಿಂದ ಹಳೆಯಂಗಡಿ ಕಡೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡಿಕೊಂಡು ಬರುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಮುಲ್ಕಿ ಪುನರೂರು ಮೊಗೇರ ದೈವಸ್ಥಾನ ಬಳಿಯ ನಿವಾಸಿಗಳಾದ ಸುರೇಂದ್ರ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು ಹಿಂಬದಿ ಸವಾರ ಸಂದೀಪ್ ಯಾನೆ ಲೋಲಾಕ್ಷ ಎಂಬವರಿಗೆ ಅಲ್ಪಪ್ರಮಾಣದ ಗಾಯಗಳಾಗಿವೆ.

