89
ಉಡುಪಿ :ಚಾಲಕ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ ಹೊಡೆದ ಘಟನೆ ಕಾಪು ವಿದ್ಯಾನಿಕೇತನ ಶಾಲೆಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಅಪಘಾತದಲ್ಲಿ ಕಾರು ಚಾಲಕ ಗಾಯಗೊಂಡಿದ್ದು, ಗಾಯಗೊಂಡವರನ್ನು ಕಾರು ಚಲಾಯಿಸುತ್ತಿದ್ದ ಕೊಪ್ಪಲಂಗಡಿಯ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಕಾಪುನಿಂದ ಉಚ್ಚಿಲ ಕಡೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇಸ್ಮಾಯಿಲ್ ಅವರನ್ನು ಎಸ್‌ಡಿಪಿಐ ಅಂಬ್ಯುಲೆನ್ಸ್ ನಲ್ಲಿ ಜಲಾಲುದ್ದೀನ್ ಉಚ್ಚಿಲ ಹಾಗೂ ಹಮೀದ್ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

