Home » ಕೊಲ್ಲೂರು : ಜೀಪು ಹಾಗೂ ಟೆಂಪೋ ಮಧ್ಯೆ ಅಪಘಾತ
 

ಕೊಲ್ಲೂರು : ಜೀಪು ಹಾಗೂ ಟೆಂಪೋ ಮಧ್ಯೆ ಅಪಘಾತ

by Kundapur Xpress
Spread the love

ಉಡುಪಿ: ಕೊಡಚಾದ್ರಿಯಿಂದ ಕೇರಳದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಟೆಂಪೋ ಮಧ್ಯೆ ಕೊಲ್ಲೂರು ದಳಿ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡ ಬಗ್ಗೆ ವರದಿಯಾಗಿದೆ.ಅಪಘಾತದಲ್ಲಿ ಜ್ಯೋತಿ(34),ಆರ್ಯ ಅನೂಪ್ (26)ಮೃತ ಪಟ್ಟಿದ್ದಾರೆ. ಆಯನ್(5), ಅವನಿ(8) ಅರ್ಜುನ್(9), ಮಿನಿ(60), ಅಬೆ(37), ಅನೂಪ್ (37) ಜ್ಯೋತಿ(43), ಜೀಪ್ ಚಾಲಕ ದೇವರಾಜ್ ಗಂಭೀರ ಗಾಯಗೊಂಡ‌ವರು ಎಂದು ಪೊಲೀಸರು ತಿಳಿಸಿದ್ದಾರೆ.

ಕೊಡಚಾದ್ರಿಯಿಂದ ಕೊಲ್ಲೂರಿನತ್ತ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಕೊಲ್ಲೂರು ಕಡೆಯಿಂದ ನಾಗೋಡಿ ಕಡೆಯತ್ತ ಸಾಗುತ್ತಿದ್ದ ಟೆಂಪೋ ಮಧ್ಯೆ ಈ ಅಪಘಾತ ನಡೆದಿದೆ. ಮೃತರು ಹಾಗೂ ಗಾಯಾಳುಗಳು ಕೇರಳ ಮೂಲದವರೆಂದು ಸದ್ಯ ತಿಳಿದುಬಂದಿದೆ.

ಕೊಲ್ಲೂರು ಠಾಣೆ ಪಿಎಸ್‌ಐಗಳಾದ ವಿನಯ್ ಎಂ.ಕೊರ್ಲಹಳ್ಳಿ, ಭೀಮಾಶಂಕರ್ ಘಟನಾ ಸ್ಥಳಕ್ಕೆ ಹಾಗೂ ಗಾಯಾಳುಗಳಿರುವ ಆಸ್ಪತ್ರೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

error: Content is protected !!