ಬೆಂಗಳೂರು : ಜಮ್ಮು- ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬಸ್ಸೊಂದು ಕಂದಕಕ್ಕೆ ಉರಳಿ ಬಿದ್ದು 36 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು 19 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ
3 ಬಸ್ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ ಘಟನೆಗೆ ಸಂಬಂಧಿಸಿದಂತೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಅತೀವ ಸಂತಾಪವನ್ನು ವ್ಯಕ್ತಪಡಿಸಿದ್ದು ಮೃತಪಟ್ಟವರಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ಪರಿಹಾರ ಧನವನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿ ಯೋಜನೆ ಅಡಿ ಘೋಷಿಸಿದ್ದಾರೆ ಗಾಯಗೊಂಡವರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗುವುದೆಂದು ಕೇಂದ್ರ ಸಚಿವರೊಬ್ಬರು ತಿಳಿಸಿದ್ದು ಉನ್ನತ ಮಟ್ಟದ ತನಿಖೆಗಾಗಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ