87
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರಿನಲ್ಲಿ ಕಾರೊಂದು ಡಿವೈಡರ್ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ನಡೆದಿದೆ ಮೃತರನ್ನು ಕಡಬ ತಾಲೂಕಿನ ಸವಣೂರು ನಿವಾಸಿ ಕಾರ್ತಿಕ್(23) ಎಂದು ಗುರುತಿಸಲಾಗಿದೆ.ಕಾರಿನಲ್ಲಿದ್ದ ಸವಣೂರು ನಿವಾಸಿಗಳಾದ ಹರ್ಷಿತ್, ದೀಕ್ಷಿತ್, ಜಗದೀಶ್ ಮತ್ತು ನಿತಿನ್ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ನೂತನವಾಗಿ ನಿರ್ಮಾಣಗೊಂಡ ಮೆಲ್ಕಾರ್ ಎಲಿವೆಟೆಡ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದಿದೆ.ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

