86
ಉಡುಪಿ : ದಿನಾಂಕ 27/09/2025 ರಂದು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರಿನಲ್ಲಿ AKMS ಬಸ್ ಮಾಲೀಕ ಸೈಫುದ್ದೀನ್ ಅವರ ಹತ್ಯೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 108/2025 ಕಲಂ 103 ಹಾಗೂ 3(5) ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.ಈ ಪ್ರಕರಣದಲ್ಲಿ ಈಗಾಗಲೇ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೀಗ ಪ್ರಕರಣದ ಮತ್ತೋರ್ವ ಆರೋಪಿ ಮಾಲಿ ಮೊಹಮ್ಮದ್ ಸಿಯಾನ್ (31), ತಂದೆ ಮೊಹಮದ್ ಹುಸೈನ್, ಉಡುಪಿ ಶಾಂತಿ ನಗರ ನಿವಾಸಿಯನ್ನು MGM ಕಾಲೇಜು ಬಸ್ ನಿಲ್ದಾಣದ ಬಳಿ ಎಎಸ್‌ಐ ಹರೀಶ್ ಹಾಗೂ ಪಿಸಿ ಶರಣಬಸಪ್ಪ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನಿಂದ ಕೃತ್ಯಕ್ಕೆ ಬಳಸಿದ KA20 MF 207 ಸಂಖ್ಯೆಯ ಗ್ಲಾಂಜಾ ಕಾರು ಹಾಗೂ ಮೊಬೈಲ್ ಫೋನ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

