ಮಂಗಳೂರು:ನಿವೃತ್ತಿಯಾಗುತ್ತಿರುವ ಶಿಕ್ಷಕಿಯ ದಾಖಲೆಗಳಿಗೆ ಸಹಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟು, ಶುಕ್ರವಾರ 5 ಲಕ್ಷ ರೂ.ಗಳನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಶಾಲಾ ಸಂಚಾಲಕಿಯನ್ನು ಬಂಧಿಸಿದ್ದಾರೆ.
ಮಂಗಳೂರು ಹೊರವಲಯದ ಬಜಪೆಯ ಶ್ರೀ ನಿರಂಜನ ಸ್ವಾಮಿ ಅನುದಾನಿಕ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕಿ ಜ್ಯೋತಿ ಪೂಜಾರಿ ಲೋಕಾಯಕ್ತ ಬಲೆಗೆ ಬಿದ್ದ ಆರೋಪಿ. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿದ್ದ ಶೋಭಾರಾಣಿ ಅವರ ನಿವೃತ್ತಿ ಹಾಗೂ ಉಪದಾನ ದಾಖಲೆಗಳಿಗೆ ಶಾಲಾ ಸಂಚಾಲಕರು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡಬೇಕಾಗಿತ್ತು. ಈ ದಾಖಲೆಗೆ ಸಹಿ ಹಾಕಿ ಹಾಕಲು ಲಂಚಕ್ಕೆ ಬೇಡಿಕೆ ಇಟ್ಟು ಇದೀಗ ಬಂಧನವಾಗಿದ್ದಾಳೆ.
ಲೋಕಾಯಯಕ್ತ ಎಸ್ಪಿ ಸೈಮನ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಚೆಲುವರಾಜ್ ಹಾಗೂ ಕಲಾವತಿ, ಇನ್ಸೆಕ್ಟರ್ ವಿನಾಯಕ ಬಿಲ್ಲವ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ