Home » ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಚೂರಿ ಇರಿತ
 

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಚೂರಿ ಇರಿತ

by Kundapur Xpress
Spread the love

ಉಡುಪಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಚೂರಿ ಇರಿದ ಘಟನೆ ಮಣಿಪಾಲ-ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ಐಡಿಯಲ್ ಬಿಲ್ಡಿಂಗ್‌ನ ಮಹಿಳಾ ಪಿಜಿಯಲ್ಲಿ ನಡೆದಿದೆ.

ಅಂಕೋಲ ಮೂಲದ ಯೋಗಿತಾ (23) ಹಲ್ಲೆಗೊಳಗಾದ ಯುವತಿ. ಮಂಗಳವಾರ ರಾತ್ರಿ ಪಿಜಿಗೆ ಬಂದ ಆರೋಪಿ ಯುವತಿಯೊಂದಿಗೆ ವಾಗ್ವಾದ ನಡೆಸಿ ಬಳಿಕ ಚೂರಿಯಿಂದ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ಯುವತಿಯನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಳಿ ನಡೆಸಿದ ಆರೋಪಿ ಪರಾರಿಯಾಗಿದ್ದು, ಮಣಿಪಾಲ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Related Articles

error: Content is protected !!