Home » ಆಸ್ತಿ ವಿಷಯಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಮೈದುನ
 

ಆಸ್ತಿ ವಿಷಯಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಮೈದುನ

by Kundapur Xpress
Spread the love

ಕಡಬ : ಆಸ್ತಿ ವಿಷಯಕ್ಕೆ ಸಂಬಂಧಿಸಿದ ಮನಸ್ತಾಪವೊಂದು ವಿಕೋಪಕ್ಕೆ ತಿರುಗಿ, ತನ್ನ ಸಹೋದರನ ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪೊಲೀಸರು ಐತ್ತೂರು ಗ್ರಾಮ ದ ನಿವಾಸಿ ಕುಸಮಾಧರ ಎಂಬಾತನನ್ನು ವಶಕ್ಕೆ ಪಡೆಸಿದ್ದಾರೆ.

ಐತ್ತೂರು ಗ್ರಾಮದ ಕೆರ್ಮಾಯಿ ಪಾದೆಮಜಲು ನಿವಾಸಿ ಬೇಬಿ ಹಾಗೂ ಅವರ ಮೈದುನ ಕುಸಮಾಧರ ಅವರಿಗೆ ಆಸ್ತಿ ವಿಷಯದಲ್ಲಿ ಮನಸ್ತಾಪವಿದೆ. ಬೇಬಿ ಅವರ ಪತಿ ನೋಣಯ್ಯ ಹಾಗೂ ಅವರ ಸಹೋದರ ಕುಸುಮಾಧರ ಅಕ್ಕ ಪಕ್ಕದಲ್ಲಿ ವಾಸವಾಗಿದ್ದಾರೆ. ನೋಣಯ್ಯ ಹೊಸ ಮನೆ ಕಟ್ಟಲು ಅಡಿಪಾಯ ಹಾಕಿರುತ್ತಾರೆ. ಕೊಳವೆ ಬಾವಿಯನ್ನೂ ಕೊರೆಸಿದ್ದು, ಉತ್ತಮ ನೀರು ಸಿಕ್ಕಿದೆ. ಆದರೆ ಕುಸುಮಾಧರ ಕೊರೆಸಿದ ಕೊಳವೆ ಬಾವಿಯಲ್ಲಿ ನೀರು ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಸೂಯೆಯಿಂದ ಕುಸುಮಾಧರ ಒಂದು ಕ್ಯಾನ್ ನಲ್ಲಿ ಪೆಟ್ರೋಲ್ ತಂದು ಬೇಬಿ ಮೇಲೆ ಎರಚಿ ಬೆಂಕಿ ಹಚ್ಚಲು ಮುಂದಾಗಿದ್ದಾನೆ.

ಹೆದರಿದ ಬೇಬಿ ಬೊಬ್ಬೆ ಹಾಕಿದಾಗ ಅವರ ಅತ್ತೆ ಹಾಗೂ ನೆರೆಮನೆಯವರು ಬಂದಿದ್ದಾರೆ. ಆಗ ಕುಸುಮಾಧರ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ

 

Related Articles

error: Content is protected !!