Home » ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
 

ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

by Kundapur Xpress
Spread the love

ಮಂಗಳೂರು : ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೇರಳದ ಕೊಲ್ಲಂ ನಿವಾಸಿ ಜಯಚಂದ್ರ (66) ಎಂದು ಗುರುತಿಸಲಾಗಿದೆ.

ಆರೋಪಿ ಜಯಚಂದ್ರ ವಿರುದ್ಧ 2019ರಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಆತ ನಾಪತ್ತೆಯಾಗಿದ್ದನು.

ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಕಾರಣ ಆತನ ವಿರುದ್ಧ ವಾರಂಟ್ ಜಾರಿಯಾಗಿತ್ತು. ಆತ ಪತ್ತೆಯಾಗದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಎನ್ನುವ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಆರೋಪಿಯ ಬಗ್ಗೆ ಖಚಿತ ಮಾಹಿತಿ ಪಡೆದ ಕಂಕನಾಡಿ ನಗರ ಪೊಲೀಸ್ ಸಿಬ್ಬಂದಿಗಳಾದ ಬಾಲರಾಜ್ ಮತ್ತು ರವಿಕುಮಾರ್ ಅವರು, ಕೇರಳದ ಕೊಲ್ಲಂ ನಗರದ ವಟ್ಟಕುಟ್ಟು ಲಲಿತಾ ಮಂದಿರದಲ್ಲಿರುವ ಆತನ ನಿವಾಸಕ್ಕೆ ತೆರಳಿ ಫೆಬ್ರವರಿ 3 ರಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

Related Articles

error: Content is protected !!