ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾದ ಬಿ ಎಂ ಸುಕುಮಾರ್ ಶೆಟ್ಟಿ ಅವರಿಗೆ ಟಿಕೆಟ್ ನಿರಾಕರಣೆ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ 2 ಗಂಟೆಯವರೆಗೆ ಬೈಂದೂರು ಮಂಡಲ ಪ್ರಮುಖರಾದ ದೀಪಕ್ ಕುಮಾರ್ ಶೆಟ್ಟಿ ಬಾಬು ಹೆಗಡೆ ಸದಾಶಿವ ಪಡುವರಿ ಹಾಗೂ 200ಕ್ಕೂ ಹೆಚ್ಚು ಪ್ರಮುಖ ಕಾರ್ಯಕರ್ತರ ಜೊತೆ ಸಭೆ ನಡೆಸಿ ಮುಂದಿನ ತೀರ್ಮಾನದ ಬಗ್ಗೆ ಚರ್ಚೆ ಮಾಡಲಾಯಿತು ಅದರ ಮುಂದುವರಿದ ಭಾಗವಾಗಿ ಇಂದು ಗುರುವಾರ ಮಧ್ಯಾಹ್ನ 3:00ಗೆ ಹೆಮ್ಮಾಡಿಯ ಜುವೆಲ್ ಪಾರ್ಕ್ ನ ಹಾಲ್ ನಲ್ಲಿ ಬೈಂದೂರು ಮಂಡಲದ ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ