ಕಾರೊಂದು ಬೈಕ್‌ಗೆ ಹಿಂಬದಿಯಿ೦ದ ಢಿಕ್ಕಿ : ಬೈಕ್ ಸವಾರ ಸ್ಧಳದಲ್ಲೇ ಸಾವು

by Kundapur Xpress
Spread the love

ಕಾರೊಂದು ಬೈಕ್‌ಗೆ ಹಿಂಬದಿಯಿ೦ದ ಢಿಕ್ಕಿ : ಬೈಕ್ ಸವಾರ ಸ್ಧಳದಲ್ಲೇ ಸಾವು

ಕುಂದಾಪುರ: ಹೆಮ್ಮಾಡಿ ಗ್ರಾಮದ ಕನ್ನಡಕುದ್ರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರೊಂದು ಬೈಕ್‌ಗೆ ಹಿಂಬದಿಯಿ೦ದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.

ಮೃತರನ್ನು ಹೆಮ್ಮಾಡಿ ಸಂತೋಷನಗರ ನಿವಾಸಿ ನರಸಿಂಹ ಆಚಾರ್ (60) ಎಂದು ಗುರುತಿಸಲಾಗಿದೆ.

ಗುರುವಾರ ಮಧ್ಯಾಹ್ನ ಸುಮಾರು 1.30ರ ವೇಳೆಗೆ ನರಸಿಂಹ ಆಚಾರ್ ಅವರು ತಮ್ಮ ಬೈಕ್‌ನಲ್ಲಿ ತ್ರಾಸಿ ಕಡೆಯಿಂದ ಕುಂದಾಪುರದತ್ತ ತೆರಳುತ್ತಿದ್ದರು. ಇದೇ ವೇಳೆ ಅದೇ ದಿಕ್ಕಿನಲ್ಲಿ ಸಾಗುತ್ತಿದ್ದ ಕಾರು ಬೈಕ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎ೦ದು ದೂರಿನಲ್ಲಿ ತಿಳಿಸಲಾಗಿದೆ.

ಢಿಕ್ಕಿಯ ರಭಸಕ್ಕೆ ನರಸಿಂಹ ಆಚಾ‌ರ್ ಅವರು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯಗಳಾಗಿವೆ. ಕಿವಿ ಹಾಗೂ ಮೂಗಿನಿಂದ ರಕ್ತಸ್ರಾವವಾಗಿದ್ದು, ಕೈಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಾಯಗಳಾಗಿವೆ. ಅಪಘಾತದ ಬಳಿಕ ಪ್ರಜ್ಞಾಹೀನರಾಗಿದ್ದ ಅವರನ್ನು ಸ್ಥಳೀಯರ ಸಹಕಾರದಿಂದ ಗಂಗೊಳ್ಳಿಯ ಎಮ್‌ಎಚ್‌ಐ ಆಂಬುಲೆನ್ಸ್ ನಿರ್ವಾಹ ಇಬ್ರಾಹಿಂ ಗಂಗೊಳ್ಳಿ ತಮ್ಮ ಆಂಬುಲೆನ್ಸ್‌ನಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಗಿಸುವ ಪ್ರಯತ್ನ ನಡೆಸಿದರಾದರೂ ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದಾರೆ.
ಈ ಕುರಿತು ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ಮು೦ದುವರಿಸಿದ್ದಾರೆ

 

Related Articles

error: Content is protected !!