Home » ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
 

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

by Kundapur Xpress
Spread the love

ಮಂಗಳೂರು: ಎರಡು ವರ್ಷದಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಬಂಟ್ವಾಳ, ಕನ್ಯಾನ ನಿವಾಸಿ ಇಬ್ರಾಹಿಂ ಬಾತೀಸ್ ಬಂಧಿತ ಆರೋಪಿ. ಆರೋಪಿಯು ಫೆಬ್ರವರಿ 24ರಂದು ವಿದೇಶದಿಂದ ಮರಳಿ ಬರುವಾಗ, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಸಹಕಾರದಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಟ್ಲ ಠಾಣಾ ಹೆಡ್ ಕಾನ್ಸ್‌ಟೇಬಲ್ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಅವರು ದಸ್ತಗಿರಿ ಮಾಡಿ, ನ್ಯಾಯಾಧೀಶರ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಮಾರ್ಚ್ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮುಂದೆ ಆರೋಪಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯ ಅಕ್ರ 193/2019 ಕಲಂ 427.504.394.341 IPC ಮತ್ತು 2(A) Prevention of Destruction and Loss of Property Act ಪ್ರಕರಣ ದಾಖಲಾಗಿರುತ್ತದೆ.

 

Related Articles

error: Content is protected !!