357
ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಬಿಜೆಪಿ ಎಮ್ ಎಲ್ ಎ ಟಿಕೇಟ್ ನೀಡುವುದಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮೂರನೇ ಆರೋಪಿಯನ್ನು ಬೆಂಗಳೂರು ಸಿ.ಸಿ.ಬಿ. ಪೋಲಿಸರು ಬಂಧಿಸಿದ್ದಾರೆ.
ಪ್ರಕರಣದ ಮೂರನೇ ಆರೋಪಿಯಾಗಿರುವ ಅಭಿನವ ಹಾಲಾಶ್ರೀ ಸ್ವಾಮೀಜಿಯನ್ನು ಒಡಿಶಾದ ಕಟಕ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಬಂಧನವಾಗುತ್ತಿದಂತೆ ಅಭಿನವ ಹಾಲಾಶ್ರೀ ಸ್ವಾಮೀಜಿ ತಲೆಮರಿಸಿಕೊಂಡಿದ್ದು ಅವರ ಪತ್ತೆ ಗಾಗಿ ಬೆಂಗಳೂರು ಸಿ.ಸಿ.ಬಿ. ಪೋಲಿಸರು ತೀವ್ರ ಹುಡುಕಾಟ ನಡೆಸಿದ್ದು ಒಡಿಶಾದ ಕಟಕ್ ನಲ್ಲಿ ಸ್ವಾಮೀಜಿಯನ್ನು ಬಂಧಿಸಿ ಬೆಂಗಳೂರಿಗೆ ಕರೆ ತರುತ್ತಿದ್ದಾರೆ ಎಂದು ತಿಳಿದುಬಂದಿದೆ.

