Home » 5 ಕೆಜಿ ಅಕ್ಕಿ ಬದಲು ಹಣ
 

5 ಕೆಜಿ ಅಕ್ಕಿ ಬದಲು ಹಣ

by Kundapur Xpress
Spread the love

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆ ಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಹೆಚ್ಚುವರಿ ಅಕ್ಕಿ ಹೊಂದಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ 5 ಕೆಜಿ ಅಕ್ಕಿಗೆ ಹಣವನ್ನು ನೀಡಲು ನಿರ್ಧರಿಸಿದೆ.ಈಗಾಗಲೇ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಯನ್ನು ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದ್ದು, ಉಳಿದ ಹೆಚ್ಚುವರಿ 5 ಕೆಜಿ ಅಕ್ಕಿಗೆ ರೂ 170 ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಸಂಪುಟ ಸಭೆ ಬಳಿಕ  ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ.ಅಕ್ಕಿ ಸಿಗುವವರೆಗೆ ಮಾತ್ರ ಪರ್ಯಾಯ ವ್ಯವಸ್ಥೆಯಾಗಿ ಹಣ ನೀಡುತ್ತಿದ್ದೇವೆ. ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

   

Related Articles

error: Content is protected !!