Home ಬ್ರೇಕಿಂಗ್ ನ್ಯೂಸ್ಅಕ್ರಮವಾಗಿ ಮೂರು ದನಗಳನ್ನು ಸಾಗಾಟ

ಅಕ್ರಮವಾಗಿ ಮೂರು ದನಗಳನ್ನು ಸಾಗಾಟ

by Kundapur Xpress

ಬೆಳ್ತಂಗಡಿ: ಸ್ವೀಪ್ಟ್ ಕಾರಿನಲ್ಲಿ ಅಕ್ರಮವಾಗಿ ಮೂರು ದನಗಳನ್ನು ಸಾಗಾಟ ಮಾಡುತ್ತಿದ್ದನ್ನು ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಗಳನ್ನು ಉಳ್ಳಾಲ ತಾಲೂಕಿನ ಸಜಿಪ ಪಡು ಗ್ರಾಮದ ಕೋಟೆಕನಿ ನಿವಾಸಿ ಮಹಮ್ಮದ್ ಸಿನಾನ್ (25) ಮತ್ತು ಉಳ್ಳಾಲ ತಾಲೂಕಿನ ಸಜಿಪನಾಡು ಗ್ರಾಮದ ತಂಚಿಬೆಟ್ಟು ನಿವಾಸಿ ಇಬ್ರಾಹಿಂ ಖಲೀಲ್ /ತೌಸೀಫ್ (38) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೇತೃತ್ವದಲ್ಲಿ KA-19-MC-5862 ಸ್ವೀಪ್ಟ್ ಕಾರನ್ನು ತಡೆದು ನಿಲ್ಲಸಿ ಪರಿಶೀಲನೆ ಮಾಡಿದಾಗ ಅಕ್ರಮವಾಗಿ ಮೂರು ದನಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ.

ಆರೋಪಿಗಳಿಬ್ಬರು ಮೂರು ದನಗಳನ್ನು ಜೋಹಾರ ಪಟ್ಟೂರು ಗ್ರಾಮದಿಂದ ಖರೀದಿಸಿ ಮಾಂಸ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ.ಮೂರು ಜಾನುವಾರುಗಳ ಮೌಲ್ಯ 20 ಸಾವಿರ ಮತ್ತು ಕಾರಿನ ಮೌಲ್ಯ 2 ಲಕ್ಷ ರೂಪಾಯಿಯಾಗಿದೆ. ಕಾರು ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles