88
ಶಿವಮೊಗ್ಗ: ರಾಜ್ಯದಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಯುತ್ತಿದ್ದು, ಇದನ್ನೇ ಬಂಡವಾಳ ಮಾಡಿಕೊಂಡ ದಂಪತಿ ಮಹಿಳೆಯ ತಲೆಗೆ ರಾಡ್‌ನಿಂದ ಹೊಡೆದ ಭಯಾನಕ ಘಟನೆಯೊಂದು ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯ ಆಜಾದ್ ನಗರದಲ್ಲಿ ಈ ಘಟನೆ ನಡೆದಿದೆ.ಆಜಾದ್ ನಗರ ನಿವಾಸಿ ಮಹಿಳೆ ದಿಲ್ ಶಾದ್ ಗಾಯಾಳು. ಹಲ್ಲೆ ನಡೆಸಿದ ದಂಪತಿಯನ್ನು ತಸ್ಲಿಮಾ ಹಾಗೂ ಅಸ್ಲಾಂ ಎಂದು ಗುರುತಿಸಲಾಗಿದೆ.
ಜಾತಿಗಣತಿ ಸಮೀಕ್ಷೆಯ ಹೆಸರಿನಲ್ಲಿ ಬಂದಿದ್ದ ತಸ್ಲಿಮಾ ಹಾಗೂ ಅಸ್ಲಾಂ ದಂಪತಿ, ದಿಲ್ ಶಾದ್ ಮೇಲೆ ಹಲ್ಲೆ ಮಾಡಿ ದರೋಡೆಗೆ ಯತ್ನಿಸಿರುವುದಾಗಿ ತಿಳಿದುಬಂದಿದೆ. ಸದ್ಯ ದಿಲ್ ಶಾದ್ ಗಾಯಗೊಂಡು ಆಸ್ಪತ್ರೆ ಸೇರಿದ್ದರೆ, ದರೋಡೆಗೆ ಯತ್ನಿಸಿದ ಖತರ್ನಾಕ್ ದಂಪತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

