Home » ಅಕ್ರಮ ಮಧ್ಯ ಮಾರಾಟ :ಪೊಲೀಸರ ದಾಳಿ
 

ಅಕ್ರಮ ಮಧ್ಯ ಮಾರಾಟ :ಪೊಲೀಸರ ದಾಳಿ

by Kundapur Xpress
Spread the love

ಬೆಳ್ತಂಗಡಿ : ನಿಡ್ಲೆ ಗ್ರಾಮದ ಕುದ್ರಾಯ ಬಸ್ ನಿಲ್ದಾಣದ ಅಂಗಡಿ ಬಳಿ ಅಕ್ರಮವಾಗಿ ಮಧ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮದ್ಯ ಸಮೇತ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.ಆರೋಪಿ ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದ ಕಾಯರ್ತಡ್ಕ ಪಂಚಮಿ ಪಾದೆ ಮನೆ ದಿ.ದುಗ್ಗಪ್ಪ ಗೌಡ ಮಗ ಶಾಂತಪ್ಪ (51) ಬಂಧಿತ ಆರೋಪಿ.

ಆರೋಪಿಯು ಯಾವುದೇ ಪರವಾನಿಗೆ ಅಥವಾ ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆಯದೇ ಮದ್ಯ ತುಂಬಿದ ಸ್ಯಾಚೆಟ್‌ಗಳನ್ನು ಆತನ ವಶದಲ್ಲಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದುದರಿಂದ ಆತನ ವಿರುದ್ಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

 

Related Articles

error: Content is protected !!