Home » ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ವಂಚನೆ: ಮೂವರ ಬಂಧನ
 

ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ವಂಚನೆ: ಮೂವರ ಬಂಧನ

by Kundapur Xpress
Spread the love

ಮಂಗಳೂರು:  ಸಹಕಾರಿ ಸಂಸ್ಥೆಯೊಂದರಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬದ ವ್ಯಕ್ತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಮಂಗಳೂರಿನ ಕಾವೂರು ಠಾಣೆ ಪೊಲೀಸರು ಮಂಗಳೂರಿನ ಆಕಾಶಭವನ ಆನಂದ ನಗರ ನಿವಾಸಿ ಹಾರೀಫ್ ಅಬೂಬಕ್ಕರ್ (39), ನಂತೂರು ಬಿಕರ್ನಕಟ್ಟೆ ನಿವಾಸಿ ಮಹಮ್ಮದ್ ಆಶೀಕ್ ಕಟ್ಟತ್ತಾರ್ ಹುಸೈನ್ (34) ಮತ್ತು ಕಡಬ ತಾಲೂಕು ಬೆಳಂದೂರು ಗ್ರಾಮದ ಅಬ್ದುಲ್ ರಮೀಝ್ (33) ಎಂಬಾತನನ್ನು ಬಂಧಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನಾದ ಹಾರೀಫ್ ಅಬೂಬಕ್ಕರ್ ಅ.9ರಂದು ಕಾವೂರು ಬಳಿಯ ವಿವಿಧೋದ್ದೇಶ ಸಹಕಾರಿ ಸಂಘವನ್ನು ವಂಚಿಸಿ 6.24 ಲಕ್ಷ ರೂ. ಸಾಲ ಪಡೆದಿದ್ದ. ಚಿನ್ನದ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ತಪಾಸಣೆಗೆ ಒಳಪಡಿಸಿದಾಗ ನಕಲಿ ಎಂದು ತಿಳಿದು ಬಂದಿದ್ದು, ಕಾವೂರು ಠಾಣೆಗೆ ದೂರು ನೀಡಲಾಗಿತ್ತು. ಅದರಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಬಂಧಿತರಿಂದ 5 ಲಕ್ಷ ರೂ. ನಗದು, ಸುಮಾರು 45 ಗ್ರಾಂ. ತೂಕದ ನಕಲಿ ಚಿನ್ನದ ಒಡವೆಗಳು, 20 ಲಕ್ಷ ರೂ. ಮೌಲ್ಯದ ಕಾರು ಹಾಗೂ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡಿರುವ ಸೊತ್ತುಗಳ ಒಟ್ಟು ಮೌಲ್ಯ 26.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ಅವರ ಮಾರ್ಗದರ್ಶನದಲ್ಲಿ, ಕಾವೂರು ಪೊಲೀಸ್‌ ಠಾಣಾ ಪೊಲೀಸ್‌ ನಿರೀಕ್ಷಕ ರಾಘವೇಂದ್ರ ಎಂ. ಬೈಂದೂರು, ಪೊಲೀಸ್‌ ಉಪನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ, ಎ.ಎಸ್‌.ಐ. ಚಂದ್ರಹಾಸ ಸನೀಲ್, ಎಚ್.ಸಿ. ಗಳಾದ ಸಂಬಾಜಿ ಕದಂ, ಕೆಂಚನ್ ಗೌಡ, ಪ್ರಮೋದ್ ಕುಮಾರ್. ಪಿ.ಸಿ. ಗಳಾದ ನಾಗರಾಜ್ ಬೈರಗೊಂಡ, ಪ್ರವೀಣ್, ರಿಯಾಝ್, ತೀರ್ಥಪ್ರಸಾದ್, ಆನಂದ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.

 

Related Articles

error: Content is protected !!