46
ಬಂಟ್ವಾಳ : 20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಸಜಿಪ ಮೂಡ ಗ್ರಾಮದ ಅಸಾಮಿ ಫಾರೂಕ್ ಉಮ್ಮರ್ ಫಾರೂಕ್ (32) ಬಂಧಿತ ಆರೋಪಿ.
ಆರೋಪಿಯನ್ನು ಬಂಟ್ವಾಳ ತಾಲೂಕಿನ ಮದ್ವ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದಾರೆ. ಈತನ ಮೇಲೆ ಉಪ್ಪಿನಂಗಡಿ, ಕಡಬ, ವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಕೊಣಾಜೆ, ಬ ಬಜಪೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿರುತ್ತದೆ.

