Home » ಜೇಡಿಮಣ್ಣಿನ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟ
 

ಜೇಡಿಮಣ್ಣಿನ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟ

by Kundapur Xpress
Spread the love

ಕೋಟ: ಜೇಡಿಮಣ್ಣಿನ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟ ಪ್ರಕರಣ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್ 2 ರಂದು ಪತ್ತೆಯಾಗಿದೆ.

ಕುಂದಾಪುರ ತಾಲೂಕು ಬೇಳೂರು ಗ್ರಾಮದ ಗುಳ್ಳಾಡಿ ಪ್ರದೇಶದಲ್ಲಿರುವ ರಾಜೀವ ಎಂಬುವವರ ಜಾಗದಲ್ಲಿ, ಆರೋಪಿತರಾದ ಒಂದು ಟಿಪ್ಪರ್ ವಾಹನ ಚಾಲಕ ರಮೇಶ್ ಹಾಗೂ ಮತ್ತೊಂದು ಟಿಪ್ಪರ್ ವಾಹನ ಚಾಲಕ ಮಲ್ಲಿಕಾರ್ಜುನ ಇವರು ಸರ್ಕಾರಕ್ಕೆ ಯಾವುದೇ ರಾಜಧನ ಪಾವತಿಸದೆ ಅಕ್ರಮವಾಗಿ ಜೇಡಿಮಣ್ಣು ಕಳ್ಳತನ ಮಾಡಿ, ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಎರಡು ಟಿಪ್ಪರ್ ವಾಹನಗಳನ್ನು, ತಲಾ ಸುಮಾರು 3 ಟನ್ ಜೇಡಿಮಣ್ಣಿನೊಂದಿಗೆ ವಶಪಡಿಸಿಕೊಂಡಿದ್ದಾರೆ. ಜೊತೆಗೆ ಅಕ್ರಮ ಗಣಿಗಾರಿಕೆಗೆ ಬಳಸುತ್ತಿದ್ದ ಹಿಟಾಚಿ ಯಂತ್ರವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಬಗ್ಗೆ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

 

Related Articles

error: Content is protected !!