ಕುಂದಾಪುರ :ಕಂಡ್ಲೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಳಾವರದ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಪಟ್ಟ ಕೆರೆಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಒಬ್ಬರು ಸಾವಿಗೀಡಾದ ದಾರುಣ ಘಟನೆ ನಡೆದಿದೆ
ಕಾಳಾವರ ನಿವಾಸಿಯಾದ ಹರೀಶ್ ಪೂಜಾರಿ ಎಂಬವರು ಭಾನುವಾರ ರಾತ್ರಿ ಸಮಯ 09:30 ಸುಮಾರಿಗೆ ಗಾಳ ಹಾಕಿ ಮೀನು ಹಿಡಿಯಲು ದೇವಸ್ಥಾನದ ಕೆರೆಗೆ ತೆರಳಿದ್ದು ಮೀನು ಹಿಡಿಯುತ್ತಿದ್ದಾಗ ಅಕಸ್ಮಾತ್ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ ಘಟನೆ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಕಂಡ್ಲೂರು ಗ್ರಾಮಾಂತರ ಠಾಣೆಯ ನಿರೀಕ್ಷಕರಾದ ಪವನ್ ನಾಯಕ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆಇಂದು ಬೆಳಿಗ್ಗೆ 9.00 ಗಂಟೆಯ ಸುಮಾರಿಗೆ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರಾದ ಈಶ್ವರ ಮಲ್ಪೆಯವರ ಸತತ ಕಾರ್ಯಾಚರಣೆಯಿಂದ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಲಾಯಿತು ಈ ಬಗ್ಗೆ ಕಂಡ್ಲೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ