447
ಕುಂದಾಪುರ : ಹೊಸಂಗಡಿಯ ಭಾಗಿಮನೆ ಬಳಿ ಟ್ರಕ್ಕಿಂಗ್ ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು.
ಕುಂದಾಪುರದ ಮಯೂರ ಮೆಡಿಕಲ್ ಶಾಪ್ ಮಾಲಕಿ ಶುಭಶ್ರೀ ಕಾರಂತ್ ( 53) ಸಾವನ್ನಪ್ಪಿದವರು. ಕುಂದಾಪುರದಿಂದ 15 ಜನರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರಕ್ಕಿಂಗ್ ಹೋಗಿದ್ದರು.ಮೃತದೇಹವನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆಹಾಕಿದ್ದಾರೆ.

