Home » ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು
 

ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು

by Kundapur Xpress
Spread the love

ಹಾಸನ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ನುಗ್ಗಿದ್ದು ಸ್ಥಳದಲ್ಲೇ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಹಾಸನದ ಮೊಸಳೆಹೊಸಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ಇನ್ನು ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊಸಳೆಹೊಸಳ್ಳಿ ರಾಷ್ಟ್ರೀಯ ಹೆದ್ದಾರಿ 373ರ ಚತುಷ್ಪಥ ರಸ್ತೆಯ ಒಂದು ಬದಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆಗೆ ಅವಕಾಶ ನೀಡಲಾಗಿತ್ತು. ಈ ವೇಳೆ ವೇಗವಾಗಿ ಬಂದ ಮಹಾರಾಷ್ಟ್ರ ಮೂಲದ ಟ್ರಕ್ ಮೊದಲಿಗೆ ಬೈಕ್ ಗೆ ಡಿಕ್ಕಿ ಹೊಡೆದು ನಂತರ ಮೆರವಣಿಗೆಯಲ್ಲಿ ಸಾಗುತ್ತಿದ್ದ ನೂರಾರು ಜನರ ಮೇಲೆ ನುಗ್ಗಿದೆ.ಐವರು ಸ್ಥಳದಲ್ಲೇ  ಸಾವನ್ನಪ್ಪಿದ್ದು ಮೂವರು ಚಿಕಿತ್ಸೆ ಫಲಕಾರಿಯಾಗದೆ  ಸಾವನ್ನಪ್ಪಿದ್ದಾರೆ. 10 ಮಂದಿ ಸ್ಥಿತಿ ಗಂಭೀರವಾಗಿದೆ.

 

Related Articles

error: Content is protected !!