Home » ನಿಷೇಧಿತ ಮಾದಕವಸ್ತು ಎಂಡಿಎಂಎ ಖರೀದಿಸಿ ಮಾರಾಟ : ಆರೋಪಿ ಬಂಧನ
 

ನಿಷೇಧಿತ ಮಾದಕವಸ್ತು ಎಂಡಿಎಂಎ ಖರೀದಿಸಿ ಮಾರಾಟ : ಆರೋಪಿ ಬಂಧನ

by Kundapur Xpress
Spread the love

ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಜೂ.25ರಂದು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಸುಮಾರು ₹1,50,000 ಮೌಲ್ಯದ 15 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಜಿಪ್ ಲಾಕ್ ಕವರ್, ಡಿಜಿಟಲ್ ತೂಕಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,10,500/- ಆಗಿರುತ್ತದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

Related Articles

error: Content is protected !!