Home » ಮಾದಕ ದ್ರವ್ಯ ಎಂಡಿಎಂಎ ಮಾರುಟ : ಇಬ್ಬರ ಬಂಧನ
 

ಮಾದಕ ದ್ರವ್ಯ ಎಂಡಿಎಂಎ ಮಾರುಟ : ಇಬ್ಬರ ಬಂಧನ

by Kundapur Xpress
Spread the love

ಮಂಗಳೂರು : ಬೃಹತ್ ಪ್ರಮಾಣದಲ್ಲಿ ಮಾದಕ ದ್ರವ್ಯ ಎಂಡಿಎಂಎ ಮಾರುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ ಪೊಲೀಸರು, 46.50 ಲಕ್ಷ ರೂ ಮೌಲ್ಯದ ಎಂಡಿಎಂಎಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಮಂಗಳೂರಿನ ಪೆರ್ಮನ್ನೂರು ಅಂಚೆ ಪಿಲಾರು ನಿವಾಸಿ‌ಗಳಾದ ದಾವೂದ್ ಪರ್ವೇಜ್ (40)‌ ಮತ್ತು ನಜರತ್ ಅಲಿ (37) ಬಂಧಿತ ಆರೋಪಿಗಳು.

ಎ.19 ರಂದು ಮಂಗಳೂರಿನ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಬೃಹತ್ ಪ್ರಮಾಣದ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮಾಡಲು ಬರುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಕಂಕನಾಡಿ ನಗರ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ ಮಾದಕ ದ್ರವ್ಯ ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತರಿಂದ 46,50,000 ರೂ. ಮೌಲ್ಯದ 465.8 ಗ್ರಾಂ ತೂಕದ ಎಂಡಿಎಂಎ ಮಾದಕ ದ್ರವ್ಯವನ್ನು ಕಂಕನಾಡಿ ನಗರ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ಫರ್ವೇಜ್ ಎಂಬಾತ ಯುವ ಸಮುದಾಯ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಜಿಲ್ಲೆಯ ಹೊರಗಿನಿಂದ ಬೃಹತ್ ಪ್ರಮಾಣದಲ್ಲಿ ಎಂಡಿಎಂಎ ತಂದು ಮಂಗಳೂರು ನಗರದಲ್ಲಿ ಮಾರಾಟ ಮತ್ತು ಸರಬರಾಜು ಮಾಡಲು ಪ್ರಯತ್ನಿಸುತ್ತಿರುವುದು ತನಿಖೆಯಲ್ಲಿ ತಿಳಿದುಬಂದಿರುತ್ತದೆ.

ಈತನ ವಿರುದ್ಧ ಈಗಾಗಲೇ ಪಾಂಡೇಶ್ವರ, ವಾಮಂಜೂರು, ಬಂದರು ಪೊಲೀಸ್ ಠಾಣೆ, ಬೆಂಗಳೂರಿನ ಅಮೃತಹಳ್ಳಿ ಮತ್ತು ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಮಾರಾಟ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ.

ಈತನು ರೂಢಿಗತ ಡ್ರಗ್ ಪೆಡ್ಲರ್ ಆಗಿರುತ್ತಾನೆ. ಈತನ ಸ್ನೇಹಿತ ನಜರತ್ ಅಲಿ ಈತನೊಂದಿಗೆ ಡ್ರಗ್ ಪೆಡ್ಲಿಂಗ್ ವ್ಯವಹಾರಕ್ಕೆ ಸಹಕರಿಸುತ್ತಾ ಈ ಕೃತ್ಯದಲ್ಲಿ ತೊಡಗಿಸಿಕೊಂಡಿರುತ್ತಾನೆ.

 

Related Articles

error: Content is protected !!