Home » ಮಾದಕ ವಸ್ತು ವಶ : ಇಬ್ಬರ ಬಂಧನ
 

ಮಾದಕ ವಸ್ತು ವಶ : ಇಬ್ಬರ ಬಂಧನ

by Kundapur Xpress
Spread the love

ಮಂಗಳೂರು : ಡ್ರಗ್ಸ್‌ ಮುಕ್ತ ಮಂಗಳೂರು ಕಾರ್ಯಾಚರಣೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು  ಎಂ ಡಿ ಎಂ ಎ (MDMA) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ 4,95,000/- ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ

ಮಂಗಳೂರು ನಗರದ ಉಳ್ಳಾಲ ತಾಲೂಕಿನ ಮುಡಿಪು ಮೂಳೂರು ಎಂಬಲ್ಲಿ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಆರೋಪಿಗಳು ಬೆಂಗಳೂರಿನಲ್ಲಿ ವಿದೇಶಿ ಪ್ರಜೆಯಿಂದ MDMA ಎಂಬ ಮಾದಕ ವಸ್ತುವನ್ನು ಖರೀದಿ ಮಾಡಿ ತಂದು ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಆರೋಪಿಗಳಿಂದ 1 ಲಕ್ಷ 75 ಸಾವಿರ ರೂ ಮೌಲ್ಯದ 35 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಆಲ್ಟೋ ಕಾರು ಹಾಗೂ ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು ಅದರ ಒಟ್ಟು ಮೌಲ್ಯ 4,95,000 ಎಂಧು ತಿಳಿದುಬಂದಿದೆ

ಬಂಧಿತ ಆರೋಪಿಗಳಾದ  ಬಂಟ್ವಾಳ ತಾಲೂಕಿನ ಕೊಲ್ನಾಡು ಬೊಲ್ಪಾದೆ ಹೌಸ್ ನಿವಾಸಿ ದಿ.ಮೊಹಮ್ಮದ್ ರವರ ಮಗ ಅಬ್ದುಲ್ ರಹಿಮಾನ್ (ಪ್ರಾಯ:42 ವರ್ಷ) ಹಾಗೂ ಬೆಳ್ತಂಗಡಿ ತಾಲೂಕು ಇಳಂತಿಲಾ ಗ್ರಾಮ ಜೋಗಿಬೆಟ್ಟು ಅಡವಿನಬಾಗಿಲು ಹೌಸ್ ನಿವಾಸಿಯಾಗಿದ್ದು ದಿ.ಅಬ್ದುಲ್ ಕುನ್ನಿಯವರ ಮಗನಾದ ಮೊಹಮ್ಮದ್ ಜಿಯಾದ್( ಪ್ರಾಯ:22) ಎಂದು ಗುರುತಿಸಲಾಗಿದೆ

ಆರೋಪಿತರಲ್ಲಿ ಅಬ್ದುಲ್ ರಹಿಮಾನ್ ಎಂಬಾತನ ಮೇಲೆ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಗ್ರಹ ಕಳುವು ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಗಲಾಟೆ ಪ್ರಕರಣ, ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ಹಾಗೂ ಉಪ್ಪಿನಂಗಡಿ ಠಾಣೆಯಲ್ಲಿ MDMA ಮಾರಾಟ ಪ್ರಕರಣಗಳು ದಾಖಲಾಗಿದ್ದು ಆರೋಪಿ ಮೊಹಮ್ಮದ್ ಜಿಯಾದ್ ಎಂಬಾತನ ಮೇಲೆ ಈ ಹಿಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ MDMA ಸೇವನೆ ಮಾಡಿದ ಪ್ರಕರಣ ದಾಖಲಾಗಿರುತ್ತದೆ

ಕಾರ್ಯಾಚರಣೆಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗರ್ವಾಲ್ ರವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಶ್ರೀ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಶ್ರೀ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಶ್ರೀ ಪಿ.ಎ.ಹೆಗಡೆವರ ನೇತೃತ್ವದಲ್ಲಿ ಆರೋಪಿಗಳ ಪತ್ತೆ ಮತ್ತು ಸೊತ್ತು ಸ್ವಾಧೀನ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಯವರು ಪಾಲ್ಗೊಂಡಿದ್ದರು

   

Related Articles

error: Content is protected !!