111
ಉಡುಪಿ: ಮಾದಕ ವಸ್ತು ಎಂ.ಡಿ.ಎಂ.ಎ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಇಕ್ಬಾಲ್ (33) ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಆತನಿಂದ 43,800 ಮೌಲ್ಯದ ಎಂ.ಡಿ.ಎಂ.ಎ ಸಹಿತ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ ಹಾಗೂ ಉಡುಪಿ ನಗರ ಠಾಣೆ ಪೊಲೀಸ್ ನಿರೀಕ್ಷಕ ಮಂಜುನಾಥ್. ವಿ ಬಡಿಗೇರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.
ಆರೋಪಿ ಮೂಡನಿಡಂಬೂರು ಗ್ರಾಮದ ಗರಡಿ ರಸ್ತೆಯಲ್ಲಿ ಸ್ಕೂಟಿಯಲ್ಲಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ

