Home » ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ
 

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ

ಏಳು ಹಂತಗಳಲ್ಲಿ ಚುನಾವಣೆ, ಜೂ 4 ಮತ ಎಣಿಕೆ

by Kundapur Xpress
Spread the love

ನವದೆಹಲಿ: ಲೋಕಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಶನಿವಾರ ಘೋಷಣೆ ಮಾಡಿದೆ. ಸುದ್ದಿಗೋಷ್ಠಿಯನ್ನು ನಡೆಸಿದ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಮುಕ್ತ ಪಾರದರ್ಶಕ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಂಪೂರ್ಣ ತಯಾರಿದೆ ಎಂದರು.

ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ.

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26 ಮತ್ತು ಮೇ 7 ರಂದು ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಎರಡನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ.

ಏಪ್ರಿಲ್ 19ರಂದು ಮೊದಲ ಹಂತದ ಮತದಾನ

ಏಪ್ರಿಲ್ 26ರಂದು ಎರಡನೇ ಹಂತದ ಮತದಾನ

ಮೇ 7ರಂದು ಮೂರನೇ ಹಂತದ ಮತದಾನ

ಮೇ 20 ರಂದು ನಾಲ್ಕನೇ ಹಂತದ ಮತದಾನ

ಮೇ 25 ರಂದು ಐದನೇ ಹಂತದ ಮತದಾನ

ಮೇ 25 ರಂದು ಐದನೇ ಹಂತದ ಮತದಾನ

ಜೂನ್ 1 ರಂದು ಐದನೇ ಹಂತದ ಮತದಾನ

ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟ

ದೇಶಾದ್ಯಂತ 97 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ದೇಶಾದ್ಯಂತ 10.5 ಲಕ್ಷ ಮತದಾನ ಕೇಂದ್ರಗಳು ಇದ್ದು, ಚುನಾವಣಾ ಕರ್ತವ್ಯಕ್ಕೆ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ ಮಾಡಲಾಗುವುದು. ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗುವುದು ಎಂದರು.

12 ರಾಜ್ಯಗಳಲ್ಲಿ ಪುರುಷ ಮತದಾರಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ನಾವು ಬದ್ಧರಾಗಿದ್ದೇವೆ. 17 ನೇ ಲೋಕಸಭೆಯ ಅವಧಿಯು 16 ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರಪ್ರದೇಶ, ಒಡಿಶಾದ ಶಾಸನ ಸಭೆಗಳ ಅವಧಿ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಕೂಡ ಜೂನ್ 2024 ರಲ್ಲಿ ಮುಕ್ತಾಯಗೊಳ್ಳಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದರು.

ಮತದಾನ ಕೇಂದ್ರಗಳಲ್ಲಿ ನೀರು, ಶೌಚಾಲಯ, ಹೆಲ್ಪ್ಡೆಸ್ಕ್, ವಿದ್ಯುತ್ ಸೇರಿ ಮೂಲಕ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತದೆ. 85 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ ಮಾಡಲಾಗುವುದು. 40%ಕ್ಕೂ ಹೆಚ್ಚು ದಿವ್ಯಾಂಗರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಮತದಾನ ಕೇಂದ್ರಗಳಲ್ಲಿ ವ್ಹೀಲ್ಚೇರ್ ವ್ಯವಸ್ಥೆ ಇರಲಿದ್ದು, ಸ್ವಯಂಸೇವಕರೂ ಇರಲಿದ್ದಾರೆ.

ಚುನಾವಣೆಯಲ್ಲಿ ಹಿಂಸೆಗೆ ಅವಕಾಶ ನೀಡಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ಎಲ್ಲಾ ಕಡೆ ಚೆಕ್ಪೋಸ್ಟ್ ಇರಲಿವೆ, ಡ್ರೋನ್ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ. ಸಿಆರ್ಪಿಎಫ್ ತುಕಡಿಗಳನ್ನು ನಿಯೋಜನೆ ಮಾಡಲಾಗುವುದು. ರೌಡಿಶೀಟರ್ಗಳ ಮೇಲೂ ತೀವ್ರ ನಿಗಾ ಇಡಲಾಗುವುದು. ಅಂತರಾಷ್ಟ್ರೀಯ ಗಡಿಯಲ್ಲೂ ಡ್ರೋಣ್ ಮೂಲಕ ಕಣ್ಗಾವಲು ಇರಿಸಲಾಗುವುದು ಎಂದರು.

   

Related Articles

error: Content is protected !!