ಬೆಂಗಳೂರು : ಕಾಂಗ್ರೆಸ್ ನ ಹಿರಿಯ ಮುತ್ಸದ್ಧಿ ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿಯಾದ ಉಮ್ಮನ್ ಚಾಂಡಿಯವರು ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನ ಹೊಂದಿದರು ಅವರಿಗೆ 79 ವರ್ಷ ವಯಸ್ಸಾಗಿತ್ತು
ಇತ್ತೀಚಿಗೆ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಕಳೆದ ಹಲವು ದಿನಗಳಿಂದ ಇವರು ಬೆಂಗಳೂರಿನಲ್ಲಿ ಚಿಕಿತ್ಸೆಗಾಗಿ ನೆಲೆಸಿದ್ದರು ಕೇರಳ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಯಾಗಿ ಅಧಿಕಾರ ವಹಿಸಿಕೊಂಡು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು
1970 ನೇ ಇಸವಿಯಿಂದ ನಿರಂತರವಾಗಿ ಕೇರಳ ರಾಜ್ಯ ವಿಧಾನಸಭೆಗೆ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವದಿ ಶಾಸಕರಾಗಿ ಪುತ್ತುಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು ವಿಶ್ವ ಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಎಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆ ಇವರದ್ದಾಗಿದೆ