ನವದೆಹಲಿ : ದೇಶದ ಮಾಜಿ ಪ್ರಧಾನಿ ಹಾಗೂ ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಮನಮೋಹನ್ ಸಿಂಗ್ ಇಂದು ಗುರುವಾರ ರಾತ್ರಿ 10.00 ಗಂಟೆಯ ಸುಮಾರಿಗೆ ನಿಧನ ಹೊಂದಿದ್ದಾರೆ ಅವರಿಗೆ 92 ವರ್ಷ ವಯಸ್ಸಾಗಿತ್ತು ಅವರು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು
ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಅರ್ಥ ಶಾಸ್ತ್ರಜ್ಞ ಪದವಿಯನ್ನು ಪಡೆದಿದ್ದು 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು 2002ರಲ್ಲಿ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿಯನ್ನು ಪಡೆದಿದ್ದರು
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೇಸ್ ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ ಎಂದು ಪ್ರದೇಶ ಕಾಂಗ್ರೇಸ್ ಸಮಿತಿ ತಿಳಿಸಿದೆ