36
ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ ಭಕ್ತರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಅಪತರಿಚಿತ ವ್ಯಕ್ತಿಗಳು ‘Hotel Accommodation’ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ಜಗದಾಂಬಿಕಾ ಅತಿಥಿ ಗೃಹದ ಕೊಠಡಿ ಕಾಯ್ದಿರಿಸುವುದಾಗಿ ಭಕ್ತರನ್ನು ನಂಬಿಸುತ್ತಿದ್ದರು ಎನ್ನಲಾಗಿದೆ.
ವಾಟ್ಸ್‌ಆಪ್ ಮೂಲಕ ಸಂಪರ್ಕಿಸಿ ಫೋನ್‌ಪೇ ಕ್ಯೂಆರ್ ಕೋಡ್ ಕಳುಹಿಸಿ ಹಣ ಪಡೆದು, ಬಳಿಕ ನಕಲಿ ರಶೀದಿ ನೀಡಿ ವಂಚಿಸಲಾಗುತ್ತಿತ್ತು ಎಂದು ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ದೂರು ನೀಡಿದ್ದಾರೆ.
ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ IT Act ಕಲಂ 66(c) ಹಾಗೂ BNS ಕಲಂ 318ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ

