Home » ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ
 

ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ

by Kundapur Xpress
Spread the love

ಮಣಿಪಾಲ: ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ನಡುವೆ ಮಾರಮಾರಿ ನಡೆದಿದ್ದು ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ ಗಾಯಗೊಂಡ ವಿದ್ಯಾರ್ಥಿ ರಾಜ್ ಗಿರೀಶ್ ಸುವರ್ಣ ಹಾಗೂ ಅವನ ಸ್ನೇಹಿತ ಸಾತ್ವಿಕ್ ಭಂಡಾರಿ ಎಂದು ತಿಳಿದು ಬಂದಿದೆ.ಈ ವಿದ್ಯಾರ್ಥಿಗಳು ತರಗತಿಯಲ್ಲಿ ಇದ್ದ ಸಂದರ್ಭ ಆರೋಪಿಗಳಾದ ರಾಜ್ ವೀರ್ ಸಿಂಗ್, ವಿಕ್ರಮ್ ಸಿಂಗ್ ಹಾಗೂ ಕ್ರಿಶ್ ಅವರು ತರಗತಿಗೆ ಬಂದು ಅವಾಚ್ಯ ಶಬ್ದಗಳಿಂದ ಬೈದು, ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ.

ಈ ಜಗಳದಲ್ಲಿ ಸಾತ್ವಿಕ್ ಭಂಡಾರಿ ಎಡ ಕೈಭುಜದ ಮೂಳೆ ಮುರಿದಿದ್ದು, ಗಂಭೀರ ಗಾಯಗೊಂಡಿದ್ದಾರೆ. ಈ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಗಳು ಅದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಮಾದಕ ಪದಾರ್ಥ ಸೇವನೆ ಮಾಡಿರುವುದು ದೃಢಪಟ್ಟಿದೆ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

 

Related Articles

error: Content is protected !!