Home » ಉಡುಪಿ : ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿ ಅಗ್ನಿ ದುರಂತ : ಭಾರೀ ಪ್ರಮಾಣದ ನಷ್ಟ
 

ಉಡುಪಿ : ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿ ಅಗ್ನಿ ದುರಂತ : ಭಾರೀ ಪ್ರಮಾಣದ ನಷ್ಟ

by Kundapur Xpress
Spread the love

ಉಡುಪಿ : ಸಿಟಿ ಬಸ್ ನಿಲ್ದಾಣದ ಸಮೀಪದ ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿ ಭಾನುವಾರ ಭಾರೀ ಅಗ್ನಿ ದುರಂತ ಸಂಭವಿಸಿದ್ದು ಭಾರೀ ಪ್ರಮಾಣದ ನಷ್ಟ ಉಂಟಾಗಿದೆ.

ಕಟ್ಟಡದಲ್ಲಿದ್ದ ಮೊಬೈಲ್ ಅಂಗಡಿ ಹಾಗೂ ಹಾರ್ಡ್‌ವೇ‌ರ್ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಆ ಬೆಂಕಿ ಕ್ಷಣಾರ್ಧದಲ್ಲಿ ಇಡೀ ವ್ಯಾಪಿಸಿದೆ. ಅಂಗಡಿಗಳಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಕಠಿಣ ಸವಾಲಿನ ನಡುವೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

 

Related Articles

error: Content is protected !!