Home » ಉಡುಪಿ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಡಾ. ಗಣೇಶ್ ಗಂಗೊಳ್ಳಿ ನಿಧನ
 

ಉಡುಪಿ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಡಾ. ಗಣೇಶ್ ಗಂಗೊಳ್ಳಿ ನಿಧನ

by Kundapur Xpress
Spread the love

ಕುಂದಾಪುರ: ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷರು ಹಾಗೂ ಖ್ಯಾತ ಜಾನಪದ ಕಲಾವಿದರಾದ ಡಾ. ಗಣೇಶ್ ಗಂಗೊಳ್ಳಿ (64) ಅವರು ಮಂಗಳವಾರ ವಿಧಿವಶರಾಗಿದ್ದಾರೆ.
ಸದಾ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುತ್ತಿದ್ದ ಅವರು, ಸೋಮವಾರ ರಾತ್ರಿ ಸಮಾರಂಭವೊಂದರಲ್ಲಿ ಗಾಯಕರಾಗಿ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿಸಿ ಮನೆಗೆ ಹಿಂದಿರುಗಿದ ಬಳಿಕ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಕುಟುಂಬಸ್ಥರು ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮಿದುಳು ರಕ್ತಸ್ರಾವದಿಂದ (ಬ್ರೈನ್ ಹೆಮರೇಜ್) ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಡಾ. ಗಣೇಶ್ ಗಂಗೊಳ್ಳಿ ಅವರು ಕೇವಲ ಸಂಘಟಕರಷ್ಟೇ ಅಲ್ಲದೆ, ಜಾನಪದ ಕಲೆಯ ಉಳಿವಿಗಾಗಿ ದಶಕಗಳಿಂದ ಶ್ರಮಿಸಿದವರು. ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾಗಿ ಜಿಲ್ಲೆಯಾದ್ಯಂತ ಹಿರಿಯ ಮತ್ತು ಕಿರಿಯ ಕಲಾವಿದರನ್ನು ಒಗ್ಗೂಡಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ನಿಧನಕ್ಕೆ ಕರಾವಳಿಯ ಸಾಂಸ್ಕೃತಿಕ ಮತ್ತು ಕಲಾ ಲೋಕದ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

 

Related Articles

error: Content is protected !!