44
ಬಂಟ್ವಾಳ : ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡು, ಬಿಸಿರೋಡಿನ ರೈಲು ನಿಲ್ದಾಣದಲ್ಲಿ ಬೋಗಿಯೊಳಗೆಯೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಮೈಸೂರು ಜಿಲ್ಲೆಯ ಸವಣೂರು ನಿವಾಸಿ ಪೊನ್ನಮ್ಮ ಅವರು ಹೆರಿಗೆಗೊಂಡ ಮಹಿಳೆಯಾಗಿದ್ದಾರೆ.
ಮಂಗಳೂರಿನಲ್ಲಿ ರೈಲು ಹತ್ತಿದ್ದ ಅವರು ಪ್ರಯಾಣದ ವೇಳೆ ಅಸ್ವಸ್ಥತೆಯನ್ನು ಅನುಭವಿಸಿ, ಸ್ವಲ್ಪ ದೂರ ಸಾಗುತ್ತಿದ್ದಂತೆಯೇ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಸಮುದಾಯದ ಮಹಿಳೆಯರು ತಕ್ಷಣ ನೆರವಿಗೆ ಧಾವಿಸಿ ಪ್ರಾಥಮಿಕ ಆರೈಕೆ ನೀಡಿದ್ದು, ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

