Home » ಗೂಗಲ್ ಮ್ಯಾಪ್ ನಂಬಿ ಕೇರಳದಿಂದ ಕೊಲ್ಲುರಿಗೆ ಪ್ರಯಾಣ
 

ಗೂಗಲ್ ಮ್ಯಾಪ್ ನಂಬಿ ಕೇರಳದಿಂದ ಕೊಲ್ಲುರಿಗೆ ಪ್ರಯಾಣ

ಎಡವಟ್ಟಿನಿಂದ ಕಾರೊಂದು ಹೊಳೆಗೆ ಬೀಳುವ ಸ್ಥಿತಿ

by Kundapur Xpress
Spread the love

ಕೋಟ : ಗೂಗಲ್ ಮ್ಯಾಪ್ ಸೂಚನೆಯ ಎಡವಟ್ಟಿನಿಂದ ಕಾರೊಂದು ಹೊಳೆಗೆ ಬೀಳುವ ಸ್ಥಿತಿಗೆ ತಲುಪಿದ ಘಟನೆ ಶುಕ್ರವಾರ ರಾತ್ರಿ ಕೋಟ–ಸೈಬ್ರಕಟ್ಟೆ ಮುಖ್ಯ ರಸ್ತೆಯ ಉಪ್ಲಾಡಿ ಹೊಳೆ ಬದಿಯಲ್ಲಿ ಸಂಭವಿಸಿದೆ.

ಕೇರಳ ಮೂಲದ ಕುಟುಂಬವೊಂದು ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕಾಗಿ ಪ್ರಯಾಣಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುತ್ತಿದ್ದ ವೇಳೆ ಗೂಗಲ್ ಮ್ಯಾಪ್‌ನಲ್ಲಿ ತೋರಿದ ಡೈವರ್ಶನ್‌ ಅನುಸರಿಸಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಬಳಿ ಬಾರ್ಕೂರು ಮಾರ್ಗವಾಗಿ ಸೈಬ್ರಕಟ್ಟೆ ಮೂಲಕ ಕೋಟದತ್ತ ಸಾಗಿತ್ತು.
ಉಪ್ಲಾಡಿ ಹೊಳೆ ಸಮೀಪ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ನಂತರ ಹೊಳೆ ಬದಿಯ ಸಿಮೆಂಟ್ ಪಿಲ್ಲರ್ ಮೇಲೆ ಹತ್ತಿ ನಿಂತಿದೆ. ಹೊಳೆಗೆ ಕೇವಲ ಒಂದು ಅಡಿ ಅಂತರದಲ್ಲಿ ಕಾರು ನಿಂತಿದ್ದರಿಂದ ಭಾರೀ ದುರಂತ ತಪ್ಪಿದಂತಾಗಿದೆ.

ಕಾರಿನಲ್ಲಿ ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಒಟ್ಟು 5 ಮಂದಿ ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಘಟನೆ ತಿಳಿದು ಸ್ಥಳಕ್ಕೆ ಧಾವಿಸಿದ ಕೋಟ ಪೊಲೀಸ್ ಸಿಬ್ಬಂದಿ ರಾಘವೇಂದ್ರ, ಆಂಬುಲೆನ್ಸ್ ಚಾಲಕ ಕಿಶೋರ್ ಶೆಟ್ಟಿ ಹಾಗೂ ಸ್ಥಳೀಯರ ಸಹಕಾರದಿಂದ ಕಾರಿನಲ್ಲಿದ್ದವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

 

Related Articles

error: Content is protected !!