Home » ಭೀಕರ ಹಿಟ್ ಅಂಡ್ ರನ್ ಅಪಘಾತ
 

ಭೀಕರ ಹಿಟ್ ಅಂಡ್ ರನ್ ಅಪಘಾತ

by Kundapur Xpress
Spread the love

ಉಡುಪಿಯ ಕಾಪುವಿನಲ್ಲಿ ನಡೆದ ಭೀಕರ ಹಿಟ್ ಅಂಡ್ ರನ್ ಅಪಘಾತದಲ್ಲಿ 21 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೃತ ಯುವಕನು ಉಡುಪಿಯ ಸಂತೆಕಟ್ಟೆ ಕಲ್ಯಾಣಪುರದ ನಿವಾಸಿ ಅನೂಶ್ ಭಂಡಾರಿ. ಮಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಅವನು, ಕಳೆದ ರಾತ್ರಿ ಸ್ಕೂಟಿಯಲ್ಲಿ ಬರುತ್ತಿದ್ದ ವೇಳೆ ಕಾಪು ಬಳಿ ಅಪಘಾತ ಸಂಭವಿಸಿದೆ.ಅಪಘಾತದ ಬಳಿಕ ಮತ್ತಿತರ ವಾಹನಗಳು ಮೃತದೇಹದ ಮೇಲೆ ಹರಿದಿರುವ ಶಂಕೆ ವ್ಯಕ್ತವಾಗಿದ್ದು, ದೇಹ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅನೂಶ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರೂ, ಆರು ತಿಂಗಳ ಹಿಂದೆ ಉಡುಪಿಗೆ ವಾಪಸಾಗಿದ್ದ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

 

Related Articles

error: Content is protected !!