Home » ನಾಳೆ ಶಾಲೆಗಳಿಗೆ ರಜೆ ಘೋಷಣೆ
 

ನಾಳೆ ಶಾಲೆಗಳಿಗೆ ರಜೆ ಘೋಷಣೆ

by Kundapur Xpress
Spread the love

ಕುಂದಾಪುರ : ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗೃತಾ ಕ್ರಮವಾಗಿ ನಾಳೆ ದಿನಾಂಕ 12.06.2025 ರಂದು ಉಡುಪಿ ಜಿಲ್ಲೆಯಾದ್ಯಂತ  ಶಾಲೆಗಳಿಗೆ ರಜೆ ಘೋಷಿಸಲಾಗಿದೆ

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಮುಂಜಾಗ್ರತ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿಗಳಾದ ವಿದ್ಯಾಕುಮಾರಿಯವರು ಆದೇಶ ಹೊರಡಿಸಿದ್ದಾರೆ ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ 

 

Related Articles

error: Content is protected !!