Home » ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ : 32 ಅಕ್ರಮ ಹೋಂಸ್ಟೇ ಗಳ ಪತ್ತೆ
 

ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ : 32 ಅಕ್ರಮ ಹೋಂಸ್ಟೇ ಗಳ ಪತ್ತೆ

by Kundapur Xpress
Spread the love

ಉಡುಪಿ : ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ ನಡೆದ ವಿದೇಶಿ ಮಹಿಳೆಯ ಅತ್ಯಾಚಾರ ಪ್ರಕರಣದ ಹಿನ್ನಲೆಯಲ್ಲಿ, ಉಡುಪಿ ಜಿಲ್ಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 32 ಅಕ್ರಮ ಹೋಂಸ್ಟೇ ಗಳನ್ನು ಪತ್ತೆ ಹಚ್ಚಿದ್ದಾರೆ.

ಪೊಲೀಸ್ ಮಹಾ ನಿರೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರ (ಕಾನೂನು ಸುವ್ಯವಸ್ಥೆ) ನಿರ್ದೇಶನದಂತೆ ನಡೆದ ಈ ಕಾರ್ಯಾಚರಣೆಯಲ್ಲಿ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 3, ಮಲ್ಪೆ ಠಾಣೆಯಲ್ಲಿ 15, ಮಣಿಪಾಲದಲ್ಲಿ 2, ಕೋಟ ಠಾಣೆಯಲ್ಲಿ 7 ಹಾಗೂ ಪಡುಬಿದ್ರೆ ಠಾಣಾ ವ್ಯಾಪ್ತಿಯಲ್ಲಿ 5 ಅಕ್ರಮ ಹೋಂಸ್ಟೇಗಳು ಪತ್ತೆಯಾಗಿವೆ.

ಪತ್ತೆಯಾದ ಹೋಂಸ್ಟೇಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಗೆ ವರದಿ ಸಲ್ಲಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಇದೇ ವೇಳೆ ಹೋಂಸ್ಟೇ ಹಾಗೂ ರೆಸಾರ್ಟ್ ಮಾಲಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಪರವಾನಿಗೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಎಚ್ಚರಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಪರವಾನಿಗೆ ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ವಿದೇಶಿ ಪ್ರವಾಸಿಗರು ಆಗಮಿಸಿದಲ್ಲಿ, ಅವರ ವಿವರಗಳನ್ನು Form-C ಮೂಲಕ FRRO ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡುವುದು ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ. ಜೊತೆಗೆ, ಹೋಂಸ್ಟೇ/ ರೆಸಾರ್ಟ್‌ಗಳಲ್ಲಿ ವಾಸಿಸುವ ವಿದೇಶಿಯರ ಭದ್ರತೆ ಕುರಿತು ಹೆಚ್ಚಿನ ನಿಗಾವಹಿಸಲು ಸೂಚಿಸಲಾಗಿದೆ.

 

Related Articles

error: Content is protected !!