Home » ಪಾಳು ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ
 

ಪಾಳು ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

by Kundapur Xpress
Spread the love

ಉಡುಪಿ: ಆದಿ ಉಡುಪಿ ಎಪಿಎಂಸಿ ಮಾರುಕಟ್ಟೆಯ ಹಿಂಭಾಗದ ಖಾಸಗಿ ಸ್ಥಳದಲ್ಲಿದ್ದರುವ ಪಾಳು ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಮೃತದೇಹ ಗುರುತಿಸಲಾಗದಷ್ಟು ಕೊಳೆತು ಹೋಗಿದ್ದು, ವ್ಯಕ್ತಿ ಹದಿನೈದು ದಿನಗಳ ಹಿಂದೆಯೇ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಅಗ್ನಿಶಾಮಕ ದಳ ಹಾಗೂ ಸಮಾಜಸೇವಕ ನಿತ್ಯಾನಂದ‌ ಒಳಕಾಡು ನೇತೃತ್ವದಲ್ಲಿ ಬಾವಿಯಿಂದ ಮೃತದೇಹವನ್ನು ಮೇಲೆತ್ತಲಾಯಿತು. ಬಳಿಕ ಮಣಿಪಾಲ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರದಲ್ಲಿ ಮರಣೋತ್ತರ ಪ್ರಕ್ರಿಯೆ ನಡೆಸಲಾಯಿತು.ನಗರ ಪೋಲಿಸ್ ಠಾಣೆಯ‌ ಎಸ್ಐ ಹರೀಶ್ ಹಾಗೂ ಹೆಡ್ ಕಾನ್ ಸ್ಟೇಬಲ್ ಜಾಸ್ವ ಕಾನೂನು ಪ್ರಕ್ರಿಯೆ ನಡೆಸಿದರು. ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

 

Related Articles

error: Content is protected !!