Home ಕರಾವಳಿ ಸುದ್ದಿಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ : ಲಾರಿ ಪೊಲೀಸರ ವಶಕ್ಕೆ

ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ : ಲಾರಿ ಪೊಲೀಸರ ವಶಕ್ಕೆ

Illegal Transport of Red Stones: Lorry Seized by Police

by Kundapur Xpress

ವಿಟ್ಲ: ಯಾವುದೇ ಪರವಾನಿಗೆ ಅಥವಾ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಕ್ಟೋಬರ್ 6ರಂದು ರಾತ್ರಿ ವಿಟ್ಲ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಉಕ್ಕುಡ ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ KA-21-C-8689 ನೋಂದಣಿಯ ಈಚರ್ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. 

ಲಾರಿಯಲ್ಲಿ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದ್ದು, ಸಾಗಾಟಕ್ಕೆ ಅಗತ್ಯವಿರುವ ಪರವಾನಿಗೆ ಅಥವಾ ದಾಖಲೆಗಳನ್ನು ಚಾಲಕ ಹೊಂದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಲಾರಿ ಚಾಲಕನನ್ನು ತಣ್ಣೀರುಪಂತದ ಪ್ರದೀಪ್ ಮಡಿವಾಳ (36) ಎಂದು ಗುರುತಿಸಲಾಗಿದೆ. ಪಂಚರ ಸಮಕ್ಷಮ ಲಾರಿಯನ್ನು ಪರಿಶೀಲಿಸಿದಾಗ ಸುಮಾರು 250 ಕೆಂಪು ಕಲ್ಲುಗಳು ಪತ್ತೆಯಾಗಿದ್ದು, ಅವುಗಳ ಅಂದಾಜು ಮೌಲ್ಯ ₹5 ಸಾವಿರ ಎಂದು ತಿಳಿದುಬಂದಿದೆ.

ಲಾರಿಯ ಅಂದಾಜು ಮೌಲ್ಯ ಸುಮಾರು ₹10 ಲಕ್ಷ ಎನ್ನಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Articles

Leave a Comment

This site uses Akismet to reduce spam. Learn how your comment data is processed.