ಹೊಸದಿಲ್ಲಿ: ಗುಜರಾತ್ ಚುನಾವಣಾ ಪ್ರಚಾರದ ವೇಳೆ ಮೋದಿ ಸಮುದಾಯವನ್ನು ನಿಂದಿಸಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಭಂಧಿಸಿದಂತೆ ಇಂದು ಗುರುವಾರ ಸೂರತ್ ಕೋರ್ಟ್ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ ಆದೇಶ ಹೊರಬಿದ್ದ ಬೆನ್ನಲ್ಲೇ ರಾಹುಲ್ ಗಾಂಧಿಯವರು ಕೋರ್ಟ್ ಗೆ ಅರ್ಜಿ ಸಲ್ಲಿಸಿ 15.000 ಬಾಂಡ್ ಮೇಲೆ ಜಾಮೀನು ಪಡೆದುಕೊಂಡಿದ್ದು ಸದ್ಯ 1 ತಿಂಗಳ ಕಾಲ ಅವರಿಗೆ ರಿಲೀಫ್ ಸಿಕ್ಕಿದೆ
ರಾಹುಲ್ ಗಾಂಧಿಗೆ ಶಿಕ್ಷೆ ಪ್ರಕಟವಾಗುತ್ತಿದ್ದಂತೆ ದೇಶದ ಹಲವೆಡೆ ಪ್ರತಿಭಟನೆಗಳು ನಡೆಯಿತು ರಾಹುಲ್ ಗಾಂಧಿಯವರು ನನ್ನ ಧರ್ಮ ಸತ್ಯ ಅಹಿಂಸೆಯೇ ನನ್ನ ಅಸ್ತ್ರ ಎಂದು ಟ್ವೀಟ್ ಮಾಡಿದ್ದರು
ಭಾರತ್ ಜೋಡೊ ಯಾತ್ರೆಯಲ್ಲಿ ಸಿಕ್ಕ ಅಭೂತಪೂರ್ವ ಯಶಸ್ಸನ್ನು ಸಹಿಸಲಾರದೇ ರಾಜಕೀಯ ಪ್ರೇರಿತವಾಗಿ ಸುಳ್ಳು ದೂರನ್ನು ದಾಖಲಿಸಿದ್ದಾರೆ ಎಂದು ಕರ್ನಾಟಕದ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ