ಕುಂದಾಪುರ : ಸಂಘದ ಸ್ವಯಂಸೇವಕನಾಗಿ ಬಿಜೆಪಿಯ ಕಾರ್ಯಕರ್ತನಾಗಿ ಬಿಜೆಪಿಯಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿ ಮಂತ್ರಿಯಾಗಿ ಮುಖ್ಯಮಂತ್ರಿಯಾಗಿಯೂ ಕಾರ್ಯ ನಿರ್ವಹಿಸಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಒಂದೇ ಕಾರಣಕ್ಕೆ ಬಿಜೆಪಿ ತ್ಯಜಿಸಿ ಕಾಂಗ್ರೇಸ್ ಸೇರಿದ್ದ ಜಗದೀಶ್ ಶೆಟ್ಟರ್ ಇಂದು ಮರಳಿ ಮಾತೃಪಕ್ಷ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ
ಕಾರ್ಯಕರ್ತರ ಒತ್ತಾಸೆ ಹಾಗೂ ಹಿರಿಯ ನಾಯಕರ ಅಭಿಲಾಷೆ ಮತ್ತು ಮೋದಿಯವರ ನಾಯಕತ್ವಕ್ಕೆ ತಲೆಬಾಗಿ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದು ಕರ್ನಾಟಕ ಪ್ರದೇಶ ಕಾಂಗ್ರೇಸ್ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರಿಗೆ ಪ್ರಾರ್ಥಮಿಕ ಸದಸ್ಯತ್ವದ ರಾಜೀನಾಮೆ ಪತ್ರವನ್ನು ಇ-ಮೈಲ್ ಮುಖಾಂತರ ಕಳುಹಿಸಿದ್ದು ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ರಾಜೀನಾಮೆ ಪತ್ರವನ್ನು ವಿಧಾನಸಭಾಧ್ಯಕ್ಷರಿಗೆ ಇ-ಮೈಲ್ ಮಾಡಿದ್ದೇನೆ ಎಂದರು