ಬೆಂಗಳೂರು : ಚಿತ್ರನಟ ಹಾಗೂ ಐಎಎಸ್ ಅಧಿಕಾರಿ ಮತ್ತು ಬಿಜೆಪಿ ಮುಖಂಡರಾದ ಕೆ ಶಿವರಾಮ್ ಹೃದಯಾಘಾತದಿಂದ ಇಂದು ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು
ನಟ ಶಿವರಾಮ್‌ರವರು ಮೊತ್ತ ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಅಧಿಕಾರಿಯಾದ ಮೊಟ್ಟ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ

1953ರಲ್ಲಿ ರಾಮನಗರ ಜಿಲ್ಲೆಯ ಬಿಡದಿ ಬಳಿಯಲ್ಲಿ ಜನಿಸಿದ ಶಿವರಾಮ್ 1985 ರಲ್ಲಿ ಕ ಎ ಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದರು ನಂತರ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಅಧಿಕಾರಿಯಾಗಿ 2013ರಲ್ಲಿ ಐ ಎ ಎಸ್ ಹುದ್ದೆಗೆ ರಾಜೀನಾಮೆ ನೀಡಿ ಸ್ವಯಂ ನಿವೃತ್ತಿ ಪಡೆದಿದ್ದರು
1993ರಲ್ಲಿ ಸಿನಿಮಾರಂಗಕ್ಕೆ ಕಾಲಿರಿಸಿದ ಶಿವರಾಮ್ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದಲ್ಲಿ ಮೂಡಿಬಂದ ಬಾ ನಲ್ಲೇ ಮಧುಚಂದ್ರಕೆ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು ನಂತರ ವಸಂತ ಕಾವ್ಯ ಖಳನಾಯಕ ಸಾಂಗ್ಲಿಯಾನ -3 ಪ್ರತಿಭಟನೆ ಯಾರಿಗೆ ಬೇಡ ದುಡ್ಡು ಹಾಗೂ ಟೈಗರ್ ಸಿನಿಮಾಗಳಲ್ಲಿ ನಟಿಸಿದ್ದರು
ನಿನ್ನೆ ಬುಧವಾರ ಅವರಿಗೆ ಹೃದಯಾಘಾತವಾಗಿತ್ತು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವೃ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತಿತ್ತು ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಿಗ್ಗೆ ನಿಧನ ಹೊಂದಿದರು


