Home » ಕಾಪು : ಡೀಸೆಲ್ ತುಂಬಿಸಿ ಹಣ ನೀಡದೆ ಪರಾರಿ : ಆರೋಪಿಗಳು ಪೊಲೀಸ್ ಬಲೆಗೆ
 

ಕಾಪು : ಡೀಸೆಲ್ ತುಂಬಿಸಿ ಹಣ ನೀಡದೆ ಪರಾರಿ : ಆರೋಪಿಗಳು ಪೊಲೀಸ್ ಬಲೆಗೆ

by Kundapur Xpress
Spread the love

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುರ್ಕಾಲು ಗ್ರಾಮದ ಸುಭಾಸ್ ನಗರದಲ್ಲಿರುವ ಖಾಸಗಿ ಪ್ಯೂಯೆಲ್ ಬಂಕ್‌ನಲ್ಲಿ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಶಿರ್ವ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಆರೋಪಿಗಳಾದ ಮಹಮ್ಮದ್ ರಿಯಾಜ್ (26), ಮಹಮ್ಮದ್ ಅಫ್ರಾಜ್ (23) ಹಾಗೂ ಆಶಿಲ್ (21) ಬಂಧಿತರು.

ಕೃತ್ಯಕ್ಕೆ ಬಳಸಿದ್ದ KA14-MB-8452 ಸಂಖ್ಯೆಯ ಕಾರನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜೂನ್ 27ರಂದು ರಾತ್ರಿ ಡೇನಿಯಲ್ ಸಿ. ಅಮ್ಮಣ್ಣ ಅವರಿಗೆ ಸೇರಿದ ಫಿಲ್ಲಿಂಗ್ ಸ್ಟೇಷನ್‌ನಲ್ಲಿ ಕಾರಿಗೆ 4,711.09 ರೂ. ಮೌಲ್ಯದ ಡೀಸೆಲ್ ತುಂಬಿಸಲು ಸೂಚಿಸಿದ್ದರು. ಬಳಿಕ ಹಣ ಪಾವತಿಸಲು ಕ್ಯೂಆ‌ರ್ ಕೋಡ್ ಕೇಳಿದ ಆರೋಪಿಗಳು ಅದನ್ನು ಸ್ಕ್ಯಾನ್ ಮಾಡಿ, ಬಿಲ್‌ ನೀಡುವಂತೆ ತಿಳಿಸಿದ್ದಾರೆ. ಸಿಬ್ಬಂದಿ ಬಿಲ್ ತರುವಷ್ಟರಲ್ಲಿ ಹಣ ಪಾವತಿಸದೇ, ನಂತರ ನೀಡುವುದಾಗಿ ನಂಬಿಸಿ ಕಾರಿನಲ್ಲಿ ಪರಾರಿಯಾಗಿದ್ದರು. ಈ ಸಂಬಂಧ ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾರ್ಕಳ ಪೊಲೀಸ್ ಉಪಾಧೀಕ್ಷಕ ವಿಜಯ ಪ್ರಸಾದ್ ಹಾಗೂ ಕಾಪು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಅಝಮತ್ ಅಲಿ ಅವರ ಮಾರ್ಗದರ್ಶನದಲ್ಲಿ, ಶಿರ್ವ ಠಾಣೆಯ ಉಪ ನಿರೀಕ್ಷಕ ಮಂಜುನಾಥ ಮರಬದ, ಲೋಹಿತ್ ಕುಮಾ‌ರ್ ಸಿ.ಎಸ್. ಹಾಗೂ ಸಿಬ್ಬಂದಿಗಳಾದ ಹರ್ಷ ಭಟ್, ಬಸವರಾಜ ಮತ್ತು ದರಿಯಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ

 

Related Articles

error: Content is protected !!