Home ಕರಾವಳಿ ಸುದ್ದಿಕೊಲ್ಲೂರು: ರಸ್ತೆ ಬದಿಯಲ್ಲಿದ್ದ ದನ ಕಳ್ಳತನ : ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಸಿಕೊಂಡು ಪರಾರಿ

ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ದನ ಕಳ್ಳತನ : ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಸಿಕೊಂಡು ಪರಾರಿ

Kollur: Cattle Stolen from Roadside, Perpetrators Flee After Forcefully Stuffing It into Car

by Kundapur Xpress

ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ದನವನ್ನು ಮೂವರು ಕಳ್ಳರು ಬಿಳಿ ಬಣ್ಣದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಸಿಕೊಂಡು ಪರಾರಿಯಾದ ಘಟನೆ ಚಿತ್ತೂರು ಗ್ರಾಮದ ಮಾರಣಕಟ್ಟೆಯಲ್ಲಿ ಸಂಭವಿಸಿದೆ.

ಮುಂಜಾನೆ ಸುಮಾರು 1:20ಕ್ಕೆ ಶ್ರೀನಿವಾಸ ಮಂಜ ಎಂಬವರು ಮನೆಯಿಂದ ಹೊರಗೆ ಬಂದಾಗ ಜೋರಾಗಿ ನಾಯಿ ಬೊಗಳುತ್ತಿರುವುದು ಕೇಳಿಸಿದೆ. ಈ ವೇಳೆ ರಸ್ತೆಯ ಬದಿಯಲ್ಲಿದ್ದ ದನವನ್ನು ಮೂವರು ವ್ಯಕ್ತಿಗಳು ಬಿಳಿ ಬಣ್ಣದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಸಿಕೊಂಡು ಹೋಗುತ್ತಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ
ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Related Articles

Leave a Comment

This site uses Akismet to reduce spam. Learn how your comment data is processed.