Home » ಕುಂದಾಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಮನೆ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳ ಸೆರೆ
 

ಕುಂದಾಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಮನೆ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳ ಸೆರೆ

by Kundapur Xpress
Spread the love

ಕುಂದಾಪುರ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಕುಂಜೆ ಗ್ರಾಮದ ನೇರಳಕಟ್ಟೆಯಲ್ಲಿರುವ ನಿರಂಜನ್ ಭಟ್ ಅವರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು 11 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಮೇ 23ರಂದು ಬೆಳಿಗ್ಗೆ 11.47ರಿಂದ ರಾತ್ರಿ 9.10 ಗಂಟೆಯ ನಡುವಿನ ಅವಧಿಯಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಒಡೆದು ಒಳನುಗ್ಗಿ ಚಿನ್ನ, ಬೆಳ್ಳಿ ಹಾಗೂ ನಗದು ಕಳವು ಮಾಡಿದ್ದರು.
ಈ ಸಂಬಂಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ತಂತ್ರಾಡಿ ಬಾಯರಬೆಟ್ಟು ನಿವಾಸಿ ವಿಜಯ ಶೆಟ್ಟಿ (32) ಎಂಬಾತನನ್ನು ಬಂಧಿಸಲಾಗಿದ್ದು, ಆತನಿಂದ ಸುಮಾರು 9 ಲಕ್ಷ ರೂ. ಮೌಲ್ಯದ 66.22 ಗ್ರಾಂ ಚಿನ್ನ ಹಾಗೂ 175.4 ಗ್ರಾಂ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ. ಇದೇ ಪ್ರಕರಣದಲ್ಲಿ ಕಾರ್ಕಳ ತಾಲೂಕಿನ ಇಂದಾರು ಗ್ರಾಮದ ಅರ್ಜುನ ಪೂಜಾರಿ (29) ಎಂಬಾತನನ್ನು ಬಂಧಿಸಿ, ಆತನಿಂದ ಸುಮಾರು 2 ಲಕ್ಷ ರೂ. ಮೌಲ್ಯದ 18.2 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಅಶ್ರಫ್ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

 

Related Articles

error: Content is protected !!