81
ಬ್ರಹ್ಮಾವರ: ತಾಲ್ಲೂಕಿನ ಹಿಲಿಯಾಣ ಗ್ರಾಮದ ಆಮ್ರಕಲ್ಲು ಪ್ರದೇಶದಲ್ಲಿನ ಸರ್ಕಾರಿ ಹಾದಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಶಂಕರನಾರಾಯಣ ಠಾಣಾ ಪೊಲೀಸರು, ಆರೋಪಿತ ನಾರಾಯಣ ನಾಯ್ಕ (43), ತಂದೆ ದೇವಣ್ಣ ನಾಯ್ಕ,ಆಮ್ರಕಲ್ಲು ಇವರನ್ನು ಬಂಧಿಸಿದರು.ಪರವಾನಿಗೆ ಇಲ್ಲದೇ ಮಾರಾಟ ಮಾಡುತ್ತಿದ್ದ ಮೈಸೂರು ಲ್ಯಾನ್ಸರ್ ವಿಸ್ಕಿ ಬ್ರಾಂಡ್‌ನ 70 ಟೆಟ್ರಾ ಪ್ಯಾಕ್‌ಗಳನ್ನು ಹಾಗೂ ನಗದು ರೂ.430/-ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ರೂ.3,930/- ಆಗಿದೆ.ಈ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

